free Gas cylinder: ಮತ್ತೆ ಉಚಿತ ಗ್ಯಾಸ್ ಸಿಲೆಂಡರ್ ಪಡೆಯಲು ಅರ್ಜಿ ಆರಂಭ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೇ ಈ ಒಂದು ಲೇಖನಿ ಮೂಲಕ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರವು ಮತ್ತೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಗ್ಯಾಸ್ ಸಿಲಿಂಡರ್ ಹಾಗೂ ಪ್ರತಿ ತಿಂಗಳು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿಗೆ ಕೇಂದ್ರ ಸರ್ಕಾರ ಕಡೆಯಿಂದ 300 ಸಬ್ಸಿಡಿ ಹಣವನ್ನು ಪಡೆಯಲು ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗಾಗಿ ನಾವು ಈ ಒಂದು ಲೇಖನೆಯ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಗೃಹಲಕ್ಷ್ಮಿ 16ನೇ ಕಂತಿನ ಹಣ ಬಿಡುಗಡೆ.! ಇಲ್ಲಿದೆ ಸಂಪೂರ್ಣ ವಿವರ
ಪಿಎಂ ಉಜ್ವಲ ಯೋಜನೆ (free Gas cylinder)..?
ಹೌದು ಸ್ನೇಹಿತರೆ ಕೇಂದ್ರ ಸರಕಾರವು ಪಿಎಂ ಉಜ್ವಲ ಯೋಜನೆ ಅಥವಾ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಉಚಿತವಾಗಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ನೀಡುವ ಯೋಜನೆಯಾಗಿದ್ದು ಈ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಎಲ್‌ಪಿಜಿ ಗ್ಯಾಸ್ ಸಿಲೆಂಡರ್ ಖರೀದಿ ಮಾಡಲು ರೂ.300 ವರೆಗೆ ಸಬ್ಸಿಡಿ ನೀಡಲಾಗುತ್ತದೆ ಹಾಗಾಗಿ ಪ್ರಸ್ತುತ ಈ ಯೋಜನೆ ಅಡಿಯಲ್ಲಿ ಮತ್ತೆ ಹೊಸದಾಗಿ ಅರ್ಜಿ ಆರಂಭವಾಗಿದ್ದು ಆಸಕ್ತಿ ಇರುವಂತಹ ಮಹಿಳೆಯರು ಹಾಗೂ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಕನೆಕ್ಷನ್ ಪಡೆದುಕೊಳ್ಳುವವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಕೇಂದ್ರ ಸರ್ಕಾರವು 2016ರಲ್ಲಿ ಜಾರಿಗೆ ತಂದಿದ್ದು ಈ ಯೋಜನೆಯ ಮುಖ್ಯ ಉದ್ದೇಶವೇನೆಂದರೆ, ಗುಡ್ಡಗಾಡು ಹಾಗೂ ಹಳ್ಳಿಗಳಲ್ಲಿ ವಾಸ ಮಾಡುವಂಥ ಜನರಿಗೆ ಮತ್ತು ಬಡ ಮಹಿಳೆಯರಿಗೆ ಉಚಿತವಾಗಿ ಎಲ್‌ಪಿಜಿ ಗ್ಯಾಸ್ ಸಿಲೆಂಡರ್ ಕನೆಕ್ಷನ್ ನೀಡುವುದು ಹಾಗೂ ಸಬ್ಸಿಡಿ ದರದಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಒದಗಿಸುವುದು ಇದರ ಜೊತೆಗೆ ಮಹಿಳೆಯರ ಆರೋಗ್ಯವನ್ನು ಕಾಪಾಡುವ ಉದ್ದೇಶ ಈ ಒಂದು ಯೋಜನೆ ಹೊಂದಿದೆ ಹಾಗಾಗಿ ಈ ಯೋಜನೆ ಪಡೆದಿದೆ
ಪಿಎಂ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (free Gas cylinder)..?
- ಪಿಎಂ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದ್ದು ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು ಹಾಗೂ ಗರಿಷ್ಠ 59 ವರ್ಷದ ಒಳಗಿನ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು
- ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯಲು ಬಯಸುವಂತಹ ಮಹಿಳೆಯರು ಈ ಹಿಂದೆ ಯಾವುದೇ ರೀತಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಪಡೆದಿರಬಾರದು
- ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರ ಮಹಿಳೆಯ ಕುಟುಂಬದ ವಾರ್ಷಿಕ ಆದಾಯ 2,50,000 ಮೀರಬಾರದು
- ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯ ಕುಟುಂಬದಲ್ಲಿ ಯಾವುದೇ ಸರಕಾರಿ ನೌಕರಿ ಹೊಂದಿರಬಾರದು
- ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆ ಕಡ್ಡಾಯವಾಗಿ ಭಾರತದ ಪ್ರಜೆಯಾಗಿರಬೇಕು ಮತ್ತು ಭಾರತದಲ್ಲಿ ವಾಸ ಮಾಡಬೇಕು
ಕೇವಲ 500 ರೂಪಾಯಿಗೆ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಸಿಗುತ್ತದೆ..?
ಹೌದು ಸ್ನೇಹಿತರೆ ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಹಾಗೂ ಈಗಾಗಲೇ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಈ ಯೋಜನೆ ಅಡಿಯಲ್ಲಿ ಕೇವಲ 500 ಪ್ರತಿ ತಿಂಗಳು ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಸಿಗುತ್ತದೆ ಅದು ಹೇಗೆ ಎಂದರೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತಹ ಮಹಿಳೆಯರಿಗೆ ಕೇಂದ್ರ ಸರ್ಕಾರವು ಎಲ್‍ಪಿಜಿ ಗ್ಯಾಸ್ ಸಿಲಿಂಡರ್ ಕಾರಿಗೆ ರೂ.300 ಸಬ್ಸಿಡಿ ಹಣವನ್ನು ನೀಡುತ್ತಿದೆ.! ಆದ್ದರಿಂದ ಇವತ್ತಿನ ಮಾರುಕಟ್ಟೆಯಲ್ಲಿ ಗೃಹಬಳಕೆಯ 14.2KG ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಬೆಲೆ 805.50 ರೂಪಾಯಿ ಆಗಿದೆ
ಅಂದರೆ ಕೇಂದ್ರ ಸರ್ಕಾರ ನೀಡುವಂತ 300 ಸಬ್ಸಿಡಿ ಹಣವನ್ನು ತೆಗೆದರೆ ಕೇವಲ ₹505 ರೂಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪ್ರತಿ ತಿಂಗಳು ದೊರತಂತೆ ಆಗುತ್ತದೆ ಹಾಗಾಗಿ ಪ್ರತಿಯೊಬ್ಬ ಮಹಿಳೆಯರು ಈ ಯೋಜನೆಯ ಲಾಭ ಪಡೆಯಬೇಕು ಎಂಬ ಆಸೆಯ ನಮ್ಮದು ಆದ್ದರಿಂದ ನೀವು ಪಿಎಂ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿರುವ ಬೇಕಾಗುವಂತ ಅಗತ್ಯ ದಾಖಲಾತಿಗಳ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
- ಮಹಿಳೆಯ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ರೇಷನ್ ಕಾರ್ಡ್
- ಇತ್ತೀಚಿನ ಫೋಟೋಸ್
- ಇತರ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ 300 ವರೆಗೆ ಸಬ್ಸಿಡಿ ಹಣ ಪಡೆಯಲು ಬಯಸುತ್ತಿದ್ದಾರೆ ನೀವು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತಹ ಗ್ಯಾಸ್ ಏಜೆನ್ಸಿಗಳಿಗೆ ಭೇಟಿ ನೀಡಿ ಅಥವಾ ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು ಆದ್ದರಿಂದ ನೀವು ಪ್ರತಿದಿನ ಇದೇ ರೀತಿ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು